ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ: ರಾಷ್ಟ್ರಪತಿ ಕಳವಳ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬುಧವಾರ ಪಂಜಾಬ್‌ಗೆ ಭೇಟಿ ನೀಡಿದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ.

ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ಕುರಿತು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿಗಳ ಕಾರ್ಯದರ್ಶಿಯಿಂದ ಮಾಹಿತಿ ದೊರೆತಿದೆ. ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆಯಬೇಕಿದ್ದ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ರಸ್ತೆ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ರಸ್ತೆತಡೆ ಕಾರಣ ಮೇಲ್ಸೇತುವೆಯಲ್ಲಿ 15ರಿಂದ 20 ನಿಮಿಷ ಸಿಲುಕಿದ್ದರು. ಮೋದಿ ಅವರ ಪಂಜಾಬ್ ಭೇಟಿಯನ್ನು ವಿರೋಧಿಸಿ ಅಲ್ಲಿನ ರೈತ ಸಂಘಟನೆಯು ರಸ್ತೆತಡೆ ನಡೆಸಿತ್ತು. ಈ ಎಲ್ಲ ಬೆಳವಣಿಗೆ ನಂತರ ಪ್ರಧಾನಿ ಮೋದಿ ಅಲ್ಲಿಂದ ವಾಪಸ್ ತೆರಳಿದ್ದರು.

ಇದಾದ ನಂತರ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ಪ್ರಧಾನಿಯೊಂದಿಗೆ ಸಂಭಾಷಣೆ ಮಾಡಿ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿದ್ದರು.

Edited By : Nagaraj Tulugeri
PublicNext

PublicNext

06/01/2022 04:34 pm

Cinque Terre

49.4 K

Cinque Terre

8

ಸಂಬಂಧಿತ ಸುದ್ದಿ