ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ಭದ್ರತಾ ಲೋಪ ಪ್ರಕರಣ; ಇಂದು 'ಸುಪ್ರೀಂ'ನಲ್ಲಿ ವಿಚಾರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಭೇಟಿ ವೇಳೆ ಉಂಟಾದ ಭದ್ರತಾ ಲೋಪ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಧಾನಿ ಮೋದಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್‌ಪುರ್‌ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು. ಲಾಯರ್ಸ್ ವಾಯ್ಸ್ ಸಂಘಟನೆ ಈ ಬಗ್ಗೆ ಅರ್ಜಿ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿರುವ ಪೀಠವು ಇಂದು ವಿಚಾರಣೆ ನಡೆಸಲಿದೆ.

ಭದ್ರತಾ ವೈಪಲ್ಯ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಲಾಯರ್ಸ್ ವಾಯ್ಸ್ ಸಂಘಟನೆ ಕೋರಿದೆ.

Edited By : Vijay Kumar
PublicNext

PublicNext

10/01/2022 07:57 am

Cinque Terre

57.57 K

Cinque Terre

1

ಸಂಬಂಧಿತ ಸುದ್ದಿ