ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ)ಸಲ್ಲಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಇದರಿಂದ ಕೊರೊನಾ ಸೋಂಕಿನ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಪಾದಯಾತ್ರೆ ಕೈಬಿಡುವಂತೆ ನರೇಂದ್ರ ಪ್ರಸಾದ್ ಎಂಬುವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
PublicNext
11/01/2022 03:35 pm