ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೈ ಪಾದಯಾತ್ರೆ ವಿರುದ್ಧ ಹೈ ಕೋರ್ಟ್ ಕೆಂಡಾಮಂಡಲ

ಬೆಂಗಳೂರು:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಹೈಕೋರ್ಟ್ ಗರಂ ಆಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲನೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ನ್ಯಾಯಪೀಠ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕೈ ಪಾದಯಾತ್ರೆ ನಾಲ್ಕನೆಯ ದಿನಕ್ಕೆ ಪ್ರವೇಶವಾಗಿರುವ ಸಂದರ್ಭದಲ್ಲಿ ಪಾದಯಾತ್ರೆ ವಿರುದ್ಧ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿತ್ತು. ತುರ್ತು ವಿಚಾರಣೆಗೆ ನರೇಂದ್ರ ಪ್ರಸಾದ್ ಹಾಗೂ ನಂಜುಂಡಸ್ವಾಮಿ ಎಂಬುವವರು ಇಂದು ಮನವಿ ಮಾಡಿದ್ದರು.

ಕೆಪಿಸಿಸಿ ಪಾದಯಾತ್ರೆಯಿಂದ ಕೊವಿಡ್ ಹಬ್ಬಲಿದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನು ಭೇಟಿ ಮಾಡಿದ್ದಾರೆ . ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಭೀತಿ ಇದೆ. ಹೀಗಾಗಿ ಪಿಐಎಲ್ ತುರ್ತು ವಿಚಾರಣೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದರು.

ಪಿಐಎಲ್ ವಿಚಾರಣೆಯನ್ನು ತುರ್ತಾಗಿಯೇ ಕೈಗೆತ್ತಿಕೊಂಡ ಹೈಕೋರ್ಟ್ ಕಾಂಗ್ರೆಸ್‌ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿದೆ. ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದೂ ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್‌ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.

ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್ ಪಕ್ಷವನ್ನು ಪೀಠ ಪ್ರಶ್ನಿಸಿದೆ.ಮೇಕೆದಾಟು ಪಾದಯಾತ್ರೆ ವಿಚಾರದ ಬಗ್ಗೆ ಮಾಹಿತಿ ನೀಡವಂತೆ ಕೆಪಿಸಿಸಿಗೆ ಸಹ ಹೈಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ ವಿಚಾರಣೆಯನ್ನು ಜನವರಿ 14 ಕ್ಕೆ ಮುಂದೂಡಿದೆ.

Edited By :
PublicNext

PublicNext

12/01/2022 02:11 pm

Cinque Terre

97.61 K

Cinque Terre

3

ಸಂಬಂಧಿತ ಸುದ್ದಿ