ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ : ನಾಳೆ ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು: ವಾಹನಗಳ ಟೋಯಿಂಗ್ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಪದೇ ಪದೇ ಘರ್ಷಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನರ್ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕರ ಜೊತೆಗೆ ಕಾನೂನು ರೀತಿ ನಡೆದುಕೊಳ್ಳಬೇಕು, ಆದರೆ, ರಕ್ಷಣೆ ಮಾಡಬೇಕಾದ್ದವರೆ ಅತಿರೇಕ ವರ್ತನೆ ಮಾಡುವುದು ಸರಿಯಲ್ಲ ಎಂದರು. ಈ ಬಗ್ಗೆ ನಾಳೆ ಪೊಲೀಸ್ ಮಹಾನಿರ್ದೇಶಕರು, ಕಮೀಷನರ್, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ಮಾಡಿ, ಟೋಯಿಂಗ್ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡುವುದರ ಜೊತೆಗೆ ಜನ ಸ್ನೇಹಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

Edited By : Nirmala Aralikatti
PublicNext

PublicNext

30/01/2022 09:42 pm

Cinque Terre

130.68 K

Cinque Terre

11

ಸಂಬಂಧಿತ ಸುದ್ದಿ