ಭೋಪಾಲ್: ಭೂಪಾಲ್‌ನ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಸಂಸದೆ ಪ್ರಗ್ಯಾ ಸಿಂಗ್ ಅವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ವಿಡಿಯೋ ಕರೆ ಮಾಡಿದ್ದಾರೆ. ಆದರೆ ಈ ಕರೆಗಳನ್ನು ಅವರು ಸ್ವೀಕರಿಸಿಲ್ಲ. ಬಳಿಕ ಆರೋಪಿಗಳು ಅಶ್ಲೀಲ ವೀಡಿಯೊ ಮತ್ತು ಸಂದೇಶವನ್ನು ಬೇರೆ ಸಂಖ್ಯೆಯಿಂದ ಕಳುಹಿಸಿದ್ದಾರೆ ಎಂದು ಪ್ರಜ್ಞಾ ಸಿಂಗ್ ಠಾಕೂರ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಲೈಂಗಿಕ ಕಿರುಕುಳ), 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಕರೆ ಮತ್ತು ವಿಡಿಯೋಗಳು ನನ್ನ ಮಾನಹಾನಿ ಮತ್ತು ಆಕೆಯ ವರ್ಚಸ್ಸು ಹಾಳು ಮಾಡುವ ಪಿತೂರಿಯ ಭಾಗವಾಗಿದೆ ಎಂದು ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
PublicNext
07/02/2022 10:47 pm