ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಜ್ವಲ್ ರೇವಣ್ಣಗೆ 'ಸುಪ್ರೀಂ' ಸಂಕಷ್ಟ

ನವದೆಹಲಿ: 15ನೇ ವಯಸ್ಸಿನಲ್ಲಿ 23 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಈ ಆಸ್ತಿ ವಿವರದ ಬಗ್ಗೆ ಐಟಿಗೆ ಮಾಹಿತಿ ಸಲ್ಲಿಕೆ ಮಾಡಿಲ್ಲ, ಚುನಾವಣಾ ಆಯೋಗಕ್ಕೂ ತಪ್ಪು ಮಾಹಿತಿ ನೀಡಲಾಗಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಕೀಲ ದೇವರಾಜೇಗೌಡ ದೂರು ನೀಡಿದ್ದರು. ಸದ್ಯ ಪ್ರಜ್ವಲ್ ವಿರುದ್ಧ ತನಿಖೆ ನಡೆಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಲಾಗಿದ್ದ ಆಸ್ತಿ ವಿವರದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಹೈಕೋರ್ಟ್‌ ತಿರಸ್ಕರಿಸಿತ್ತು. ಇದರ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮತ್ತೆ ಅರ್ಜಿ ಪಡೆದು ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಸೂಚಿಸಿದೆ. ಅಲ್ಲದೆ ಮಂಜು ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನೂ ನೀಡಿದೆ.

Edited By : Vijay Kumar
PublicNext

PublicNext

15/02/2022 04:06 pm

Cinque Terre

45.91 K

Cinque Terre

2

ಸಂಬಂಧಿತ ಸುದ್ದಿ