ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಹಣ ವರ್ಗಾವಣೆ ಕೇಸ್‌: 'ಮಹಾ' ಸಚಿವ ಮಲಿಕ್​​ಗೆ ಮಾ.21ರವರೆಗೆ ನ್ಯಾಯಾಂಗ ಬಂಧನ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ಮುಖಂಡ, ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಮಾರ್ಚ್ 21ರವರೆಗೆ (14 ದಿನಗಳ) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 62 ವರ್ಷದ ನವಾಬ್ ಮಲಿಕ್ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು. ದಕ್ಷಿಣ ಮುಂಬೈನ ಇ.ಡಿ ಕಚೇರಿಯಲ್ಲಿ ಸುಮಾರು ಐದು ಗಂಟೆ ಅವರನ್ನು ಪ್ರಶ್ನಿಸಲಾಗಿತ್ತು.

Edited By : Vijay Kumar
PublicNext

PublicNext

07/03/2022 05:50 pm

Cinque Terre

97.39 K

Cinque Terre

3

ಸಂಬಂಧಿತ ಸುದ್ದಿ