ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ವಿ.ಸೋಮಣ್ಣನಿಗೆ ಶಾಕ್ : ಸಮನ್ಸ್ ಜಾರಿ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದಡಿ ವಸತಿ ಸಚಿವ ವಿ.ಸೋಮಣ್ಣ ವಿರುದ್ದ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಏಪ್ರಿಲ್ 16 ಕ್ಕೆ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. 2013 ರಲ್ಲಿ ರಾಮಕೃಷ್ಣ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.

ಆದರೆ, ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ವರದಿ ನೀಡಿದ್ದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ನ್ನು ಕೋರ್ಟ್ ತಿರಸ್ಕರಿಸಿದೆ. ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ, ಗಳಿಸಿದ ಆಸ್ತಿಯ ಸೂಕ್ತ ವಿವರಣೆಯನ್ನು ಪೊಲೀಸರು ನೀಡಿಲ್ಲ. ಹೀಗಾಗಿ ಅಸಮರ್ಪಕ ತನಿಖೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಸಮನ್ಸ್ ಜಾರಿ ಮಾಡಿದೆ.

Edited By : Nirmala Aralikatti
PublicNext

PublicNext

22/03/2022 04:20 pm

Cinque Terre

55.27 K

Cinque Terre

5

ಸಂಬಂಧಿತ ಸುದ್ದಿ