ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದೆ. ಹೀಗಾಗಿ ಮತ್ತೆ ಸಂಕಷ್ಟ ಎದುರಾಗಿದೆ.
ಹೌದು.. ಮಾಜಿ ಸಿಎಂ ಯಡಿಯೂರಪ್ಪಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಮಾಹಿತಿ ತಂತ್ರಜ್ಞಾನ ಕಾರಿಡಾರ್ ನಿರ್ಮಾಣಕ್ಕಾಗಿ ಮಾಡಿದ್ದ ಭೂಮಿ ಅಕ್ರಮ ಡಿನೋಟಿಫಿಕೇಶನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಏಪ್ರಿಲ್ 19ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್ ಕುಮಾರ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13(1) (ಡಿ) ಮತ್ತು 13 (2)ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಲು ಆದೇಶಿಸಿದ್ದಾರೆ.
PublicNext
27/03/2022 01:21 pm