ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್‌ಗೆ ಜೈಲು

ಭೋಪಾಲ್: ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ಗೆ ಒಂದಿಲ್ಲೊಂದು ಆಘಾತ ಎದುರಾಗುತ್ತಲೇ ಇದೆ. ಸದ್ಯ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ 1 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಹೌದು. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್​ ಮತ್ತು ಇತರ ಆರು ಮಂದಿಗೆ ಇಂದೋರ್​ನ ಜಿಲ್ಲಾ ನ್ಯಾಯಾಲಯವು ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ದಿಗ್ವಿಜಯ್ ಸಿಂಗ್ ಪ್ರಸ್ತುತ ರಾಜ್ಯಸಭೆ ಕಾಂಗ್ರೆಸ್ ಸದಸ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್ವಿಜಯ್ ಸಿಂಗ್​ಗೆ ಜೈಲು ಶಿಕ್ಷೆ ವಿಧಿಸಲಾಗಿದ್ದು, ಈ ಬಗ್ಗೆ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ನಂತರ ನ್ಯಾಯಾಲಯವು ಎಲ್ಲಾ ಅಪರಾಧಿಗಳಿಗೆ ತಲಾ 25,000 ರೂ.ಗಳ ಶ್ಯೂರಿಟಿಯ ಮೇಲೆ ಜಾಮೀನು ನೀಡಿದೆ.

ಈ ಬಗ್ಗೆ ಎಎನ್​ಐ ಜತೆ ಮಾತನಾಡಿದ ದಿಗ್ವಿಜಯ್ ಸಿಂಗ್, "ಇದು 10 ವರ್ಷಗಳ ಹಳೆಯ ಪ್ರಕರಣವಾಗಿದ್ದು, ಎಫ್‌ಐಆರ್‌ನಲ್ಲಿ ನನ್ನ ಹೆಸರಿಲ್ಲ. ಆದರೆ ರಾಜಕೀಯ ಒತ್ತಡದಿಂದ ನಂತರದಲ್ಲಿ ಹೆಸರನ್ನು ಸೇರಿಸಲಾಗಿದೆ. ನಾನು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

28/03/2022 09:01 am

Cinque Terre

92.72 K

Cinque Terre

30

ಸಂಬಂಧಿತ ಸುದ್ದಿ