ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ವಾರ ದೆಹಲಿ ವಿಧಾನಸಭೆಯಲ್ಲಿ ‘ದಿ ಕಾಶ್ಮೀರಿ ಫೈಲ್ಸ್ ‘ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾಮೆಂಟ್ ಗಳ ವಿರುದ್ಧ ತೇಜಸ್ವಿ ಸೂರ್ಯ, ಬಿಜೆಪಿ ಯುವ ಘಟಕದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರು.

ಆದರೆ, ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು 50 ಮೀಟರ್ ಗಳ ನಂತರ ಬ್ಯಾರಿಕೇಡ್ ಗಳನ್ನು ಬಳಸಿ ತಡೆದ್ದರು. ಆದರೆ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಮುರಿದು ಮುಂದೆ ಸಾಗಿದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ದಿ ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಯೂಟ್ಯೂಬ್ ನಲ್ಲಿ ಪೋಸ್ಟ್ ಮಾಡಬೇಕು ಎಂದು ಕೇಜ್ರಿವಾಲ್ ಹೇಳಿದ್ದರು.ದೆಹಲಿ ಪೊಲೀಸರ ಪ್ರಕಾರ ಸೂರ್ಯ ಸೇರಿ ಸುಮಾರು 40-50 ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Edited By : Nirmala Aralikatti
PublicNext

PublicNext

30/03/2022 03:46 pm

Cinque Terre

69.17 K

Cinque Terre

66

ಸಂಬಂಧಿತ ಸುದ್ದಿ