ಬೆಂಗಳೂರು: ಜೆಜೆಆರ್ ನಗರಲ್ಲಿ ನಡೆದ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಂದ್ರು ಕುಟುಂಬಕ್ಕೆ ಬಿಜೆಪಿ ವತಿಯಿಂದ 5 ಲಕ್ಷ ರೂ.ಪರಿಹಾರ ನೀಡಲಾಗುದು.ಇನ್ನು ಈ ಕೊಲೆ ಪ್ರಕರಣದ ಸಮಗ್ರ ತನಿಖೆಯಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದರು.
ಚಂದ್ರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಸಿ ಮಾಧ್ಯಮಗಳ ಜೊತೆ ಮಾತನಾಡಿ, ಹತ್ಯೆಗೀಡಾದ ಚಂದ್ರು ಅವರ ಸಹೋದರ ನವೀನ್, ನಮ್ಮ ಪಕ್ಷದ ಬೂತ್ ಸಮಿತಿ ಕಾರ್ಯದರ್ಶಿ ಎಂದ ಅವರು, ಏಕಾಏಕಿ ಹತ್ಯೆ ನಡೆದಿದೆ. ಅಂಗಡಿಯವರೂ ನೆರವಿಗೆ ಬರಲಿಲ್ಲ. ಇಲ್ಲಿ ಪೂರ್ವದ್ವೇಷ ಇರಲಿಲ್ಲ. ಬೈಕ್ ತಾಗಿದ್ದನ್ನೇ ನೆಪ ಮಾಡಿ, ಕನ್ನಡ ಮತ್ತು ತಮಿಳು ಮಾತ್ರ ಬರುವುದಾಗಿ ಹೇಳಿದ ಚಂದ್ರುವನ್ನು ಉರ್ದುವಿನಲ್ಲಿ ಮಾತನಾಡಿಲ್ಲ ಎಂಬ ಕಾರಣಕ್ಕೆ ಚಾಕುವಿನಿಂದ ಚುಚ್ಚಿದ್ದಾರೆ ಎಂಬುದಾಗಿ ಮನೆಯವರು ಹೇಳುತ್ತಿದ್ದಾರೆ ಎಂದು ವಿವರಿಸಿದರು.
ವಸ್ತು ಸ್ಥಿತಿಯ ಬಗ್ಗೆ ತಿಳಿಯಲು ಈ ಘಟನೆಯ ಕುರಿತು ಸಮಗ್ರ ತನಿಖೆ ಅತ್ಯಗತ್ಯ ಎಂದರು.ಪಕ್ಷದ ಕಡೆಯಿಂದ ರಾಜ್ಯಾಧ್ಯಕ್ಷರು ಕಳುಹಿಸಿದ 5 ಲಕ್ಷ ರೂಪಾಯಿ ನೆರವನ್ನು ಕೊಡಲಾಗುತ್ತಿದೆ. ಸರ್ಕಾರದ ಕಡೆಯಿಂದಲೂ ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಯವರನ್ನು ಕೋರಲಾಗುವುದು. ಇದೊಂದು ದುರದೃಷ್ಟಕರ ಸಂಗತಿ. ಎಂದಿದ್ದಾರೆ.
PublicNext
06/04/2022 08:33 pm