ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ಮುಗಿಸುತ್ತಿದ್ದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು
ಘೇರಾವ್ ಹಾಕಲು ಯತ್ನಿಸಿದ್ದಾರೆ. ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ತೋರಿಸಿ ಘೋಷಣೆ ಕೂಗಿದ್ದಾರೆ. ಇದೇ ವೇಳೆ ಕೆಲ ಕಾರ್ಯಕರ್ತರು ಪೊಲೀಸ್ ಬಸ್ ಮೇಲೆ ಕಲ್ಲು ಹಾಗೂ ಬಾಟಲಿ ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶಿತರಾಗಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪರನ್ನು ಕೊಲೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ನವರು ಇಲ್ಲಿಗೆ ಬಂದಿದ್ದರು ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
PublicNext
13/04/2022 06:59 pm