ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ಉಡುಪಿಯಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದೆ.
ಸಚಿವರೇ ಆರೋಪಿಯಾಗಿರುವ ಕಾರಣ ಇಡೀ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಉಡುಪಿ ಸೆಷನ್ಸ್ ಕೋರ್ಟ್ ಜಡ್ಜ್ ಪ್ರಕರಣದ ಎಫ್ಐಆರ್ ಕಾಪಿಯನ್ನು ಬೆಂಗಳೂರಿಗೆ ವರ್ಗಾಯಿಸಿದ್ದಾರೆ. ಇನ್ನು ಮುಂದೆ ತನಿಖೆಯನ್ನು ಉಡುಪಿ ನಗರ ಠಾಣೆ ಪೊಲೀಸರೇ ನಡೆಸುತ್ತಾರೆ. ಆದರೆ ವಿಚಾರಣೆಯು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಿಸಿಟಿವಿ ಫೂಟೇಜ್ ಗಳು ಮತ್ತು ಎಲ್ಲ ದಾಖಲೆಗಳನ್ನು ಉಡುಪಿ ಪೊಲೀಸರು ಸಂಗ್ರಹಿಸುತ್ತಿದ್ದಾರೆ.
PublicNext
14/04/2022 05:06 pm