ಬೆಂಗಳೂರು: ಹುಬ್ಬಳ್ಳಿಯಲ್ಲಿ ನಿನ್ನೆ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಹುಬ್ಬಳ್ಳಿ ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಚೋದನೆ ಮತ್ತು ಗಲಭೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಚೋದನೆ ಕೊಟ್ಟವರನ್ನೂ ಬಂಧಿಸಲಾಗುವುದು. ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ. ಕಾನೂನಿನ ಪ್ರಕಾರ ಈ ಘಟನೆಯನ್ನು ನೋಡಬೇಕು' ಎಂದು ಹೇಳಿದ್ದಾರೆ.
PublicNext
17/04/2022 11:40 am