ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸರು ಅಮಾಯಕರನ್ನು ಬಂಧಿಸಬಾರದು : ಸಿದ್ದರಾಮಯ್ಯ

ಹುಬ್ಬಳ್ಳಿ : ರಾಜಕೀಯದ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಬಂಧಿಸುವ ಮತ್ತು ತನಿಖೆಯನ್ನೇ ನಡೆಸದೆ ಅಪರಾಧಿಗಳ ಹೆಸರನ್ನು ಮಾಧ್ಯಮಕ್ಕೆ ತಿಳಿಸುವ ಕೆಲಸವನ್ನು ಮಾಡಬಾರದು. ಇದರಿಂದ ಪರಿಸ್ಥಿತಿ ಉಲ್ಭಣಗೊಂಡರೆ ಅದರ ನಿಯಂತ್ರಣದ ಭಾರ ತಮ್ಮ ಮೇಲೆಯೇ ಬೀಳಲಿದೆ ಎಂಬ ಎಚ್ಚರ ಪೊಲೀಸರಿಗೂ ಇರಬೇಕಾಗುತ್ತದೆ. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯ ಬಗ್ಗೆ ಟ್ವೀಟ್ ಮಾಡಿದ ಅವರು ಯಾರೇ ಗಲಾಟೆ ಮಾಡಿದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ, ನಿರಪರಾಧಿಗಳಿಗೆ ಶಿಕ್ಷೆಯಾಗಬಾರದು ಅಂತಹವರ ಬಂಧನವು ಆಗಬಾರದು ತಪ್ಪು ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಅಪರಾಧಿಗಳು ಕೇವಲ ಅಪರಾಧಿಗಳು, ಅವರಿಗೆ ಜಾತಿ, ಧರ್ಮಗಳಿರುವುದಿಲ್ಲ. ಇದನ್ನು ಸರ್ಕಾರ, ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಮೊದಲು ತಿಳಿದುಕೊಳ್ಳಬೇಕು. ಯಾರದೋ ಪ್ರಚೋದನೆಯಿಂದ ವಿವೇಚನೆಯನ್ನು ಕಳೆದುಕೊಂಡು ಸಿಟ್ಟಿನ ಕೈಗೆ ವಿವೇಕವನ್ನು ಕೊಡಬಾರದು, ಇಂತಹ ಸಂದರ್ಭಗಳನ್ನು ಸಹನೆ, ಸಂಯಮಗಳ ಮೂಲಕ ಎದುರಿಸಬೇಕು ಎಂದಿದ್ದಾರೆ.

ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ. ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ. ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ. ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ ಎಂದು ಟ್ವಿಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

17/04/2022 10:50 pm

Cinque Terre

97.11 K

Cinque Terre

84

ಸಂಬಂಧಿತ ಸುದ್ದಿ