ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನನ್ನು ಮಾತ್ರ ಟಾರ್ಗೆಟ್ ಮಾಡಿದ್ದಾರೆ : ಡಿಕೆಶಿ

ಬೆಂಗಳೂರು: ಬಿಜೆಪಿಯವರು ಸಾಕಷ್ಟು ಹೋರಾಟ,ಪ್ರತಿಭಟನೆಗಳನ್ನು ಮಾಡಿದ್ದಾರೆ ಅವರಿಗೆ ಬರದಿರುವ ನೋಟಿಸ್ ನನಗೆ ಮಾತ್ರ ಬರುತ್ತಿವೆ ಇದು ಪಕ್ಕಾ ದ್ವೇಷದ ರಾಜಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.ಹೌದು ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರಿಂದ ಡಿ.ಕೆ ಶಿವಕುಮಾರ್ ಅವರಿಗೆ ನ್ಯಾಯಾಲಯದಿಂದ ನೋಟಿಸ್ ಬಂದಿದೆ. ಸ್ವತಃ ಡಿ.ಕೆ ಶಿವಕುಮಾರ್ ರವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ನಾವು ಪಾದಯಾತ್ರೆ ನಡೆಸಿದ್ದಕ್ಕೆ ನಮ್ಮ ಮೇಲೆ ಕೇಸ್ ಹಾಕಿ ಕೋರ್ಟ್ಗೆ ಅಲೆಯುವಂತೆ ಮಾಡಿದೆ. ನನ್ನನ್ನು ಮಾತ್ರ ಟಾರ್ಗೆಟ್ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ನಮಗೋಸ್ಕರ ಹೋರಾಟ ಮಾಡಿದ್ವಾ?. ನಾವು ರೈತ ಪರ ಹೋರಾಟ ಮಾಡಿದ್ದು. ಇವತ್ತು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಸಮನ್ಸ್ ಆಗಿತ್ತು. ಕೊರೊನಾ ವೈರಸ್ ಸಂದರ್ಭದಲ್ಲಿ ಕೇಸ್ ಹಾಕಿದ್ದಾರೆ. ಹತ್ತು ಸಾವಿರ ಜನ ಸೇರಿಸಿದ್ದಾರೆ ಅಂತಾ ಕೇಸ್ ಹಾಕಿದ್ದಾರೆ. ಪಾದಯಾತ್ರೆ ಕೇಸ್, ರಾಮನಗರ ಕೇಸ್ ನಿಂದಾಗಿ ಕೋರ್ಟ್ ಗೆ ಅಲೆದಾಡಬೇಕು ಅಂತಾ ಅವರ ಉದ್ದೇಶ. ಶಿವಮೊಗ್ಗದಲ್ಲಿ ಈಶ್ವರಪ್ಪ, ರಾಘವೇಂದ್ರ ಪ್ರತಿಭಟನೆ ಮಾಡಿದ್ರು ಆಗ ಕಾನೂನು ಇರಲಿಲ್ವಾ ಕೊರೊನಾ ಇರಲಿಲ್ಲವಾ?. ಇದನ್ನು ಜನರು ನೋಡಬೇಕು ಬಿಜೆಪಿಗೆ ಉತ್ತರ ನೀಡಬೇಕು. ನಾವು ಯಾವುದಕ್ಕೂ ಜಗ್ಗಲ್ಲ ಎಂದು ಗುಡುಗಿದ್ದಾರೆ.

Edited By : Nirmala Aralikatti
PublicNext

PublicNext

22/04/2022 06:39 pm

Cinque Terre

168.76 K

Cinque Terre

37

ಸಂಬಂಧಿತ ಸುದ್ದಿ