ಅಮರಾವತಿ : ಅಮರಾವತಿ ಸಂಸದೆ ಮತ್ತು ಅವರ ಶಾಸಕ ಪತಿ ವಿರುದ್ಧದ ಎಫ್ ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಹೌದು ರಾಣಾ ದಂಪತಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಅಮರಾವತಿ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಪತಿ ಶಾಸಕ ರವಿ ರಾಣಾಗೆ ತೀವ್ರ ಹಿನ್ನಡೆಯಾಗಿದೆ. ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ 'ಮಾತೋಶ್ರೀ' ಹೊರಗೆ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಿದ ನಂತರ ದಂಪತಿಯನ್ನು ಶನಿವಾರ ಪೊಲೀಸರು ಬಂಧನ ಮಾಡಿದ್ದರು. ರಾಣಾ ದಂಪತಿಗಳ ಬಂಧನಕ್ಕೆ ಬಂದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
PublicNext
25/04/2022 08:47 pm