ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಶಾಸಕ ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಹುದ್ದೆ ಹೊಂದಿರುವ ಹಿನ್ನೆಲೆಯಲ್ಲಿ ಎಸ್.ಆರ್.ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎ.ಎಸ್. ಹರೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಶಾಸಕ ಎಸ್.ಆರ್.ವಿಶ್ವನಾಥ್ ಗೆ ನೋಟಿಸ್ ಜಾರಿ ಮಾಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಎಸ್.ಆರ್.ವಿಶ್ವನಾಥ್ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಎಸ್.ಆರ್. ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೋರಿ 2021ರ ಅ.4ರಂದು ಸಲ್ಲಿಸಿರುವ ಮನವಿಯನ್ನು ರಾಜ್ಯಪಾಲರು ಈವರೆಗೂ ಪರಿಗಣಿಸಿಲ್ಲ.

Edited By : Nirmala Aralikatti
PublicNext

PublicNext

27/05/2022 03:27 pm

Cinque Terre

31.97 K

Cinque Terre

0

ಸಂಬಂಧಿತ ಸುದ್ದಿ