ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ ಎಂದು ANI ವರದಿ ಮಾಡಿದೆ.
ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಎಫ್ ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.
ಕಳೆದ ತಿಂಗಳು ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂಪಾಯಿ ಮೌಲ್ಯದ ಐದು ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.
PublicNext
30/05/2022 08:57 pm