ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಪಿ. ಚಿದಂಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತು ಸಿಎ ಎಸ್.ಭಾಸ್ಕರ್ ರಾಮನ್ ಸೇರಿದಂತೆ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಆ ಬಳಿಕ ಮೇ 30 ರಂದು ಕಾರ್ತಿ ಚಿದಂಬರಂ ನಿರೀಕ್ಷಣಾ ಜಾಮೀನು ಆದೇಶವನ್ನು ದೆಹಲಿಯ ವಿಶೇಷ ನ್ಯಾಯಾಲಯ ಕಾಯ್ದಿರಿಸಿತ್ತು.
ಈ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ವಿಶೇಷ ನ್ಯಾಯಾಧೀಶ ಎಂ.ಕೆ ನಾಗಪಾಲ್, ಈ ಅರ್ಜಿಯನ್ನು ಪರಿಗಣಿಸಲು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಕಾರ್ತಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದರು.
PublicNext
03/06/2022 09:46 pm