ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಜೋತ್ ಸಿಧು ಚಂಡೀಗಢ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮತ್ತೆ ಪಟಿಯಾಲ ಜೈಲಿಗೆ ಶಿಫ್ಟ್

ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಯಕೃತ್ತಿನ ಸಮಸ್ಯೆಯಿಂದ ಗುಣಮುಖರಾಗಿ ಚಂಡೀಗಢದ ಪಿಜಿಐಯಿಂದ ಗುರುವಾರ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ನವಜೋತ್ ಸಿಂಗ್ ಸಿಧು ಅವರನ್ನು ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಯಕೃತ್ ಸಂಬಂಧಿ ಸಮಸ್ಯೆಯಿಂದಾಗಿ ಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೇ 20 ರಂದು ಪಂಜಾಬ್ ಮಾಜಿ ಕಾಂಗ್ರೆಸ್ ಮುಖ್ಯಸ್ಥರನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಶರಣಾದ ನಂತರ ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು. 1988 ರ ರೋಡ್ ರೇಜ್ ಸಾವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

Edited By : Vijay Kumar
PublicNext

PublicNext

10/06/2022 10:40 am

Cinque Terre

45.41 K

Cinque Terre

2

ಸಂಬಂಧಿತ ಸುದ್ದಿ