ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

" ನರೇಂದ್ರ ಮೋದಿ ನಾಯಿಗಿಂತಲ್ಲೂ ಕಡೆಯಾಗಿ ಸಾಯ್ತಾನೆ" : ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ

ಮುಂಬೈ: ನರೇಂದ್ರ ಮೋದಿಗೂ ನಾಯಿಯ ಸಾವು ಬರುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೇಂದ್ರ ತನಿಖಾ ಸಂಸ್ಥೆಯು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ನಾಗ್ಪುರದ ಇಡಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಮತ್ತು ಮಾಜಿ ನಗರಾಧ್ಯಕ್ಷರು ಭಾಗವಹಿಸಿದ್ದರು. ಈ ವೇಳೆ ಶೇಖ್ ಹುಸೇನ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ್ದರು.

ಈ ಸಂಬಂಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಜೊತೆಗೆ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. 48 ಗಂಟೆಗಳಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದು, ವಿಫಲವಾದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Edited By : Vijay Kumar
PublicNext

PublicNext

15/06/2022 03:58 pm

Cinque Terre

69.66 K

Cinque Terre

39