ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಇ.ಡಿ ಡ್ರೀಲ್ ನಡೆಸುತ್ತಿದ್ದಂತೆ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ನಡೆದ `ಚಲೋ ರಾಜಭವನ್’ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಹಿಳಾ ನಾಯಕಿಯೊಬ್ಬರು ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿರುವ ವಿಡಿಯೋ ವೈರಲ್ ಆಗಿತ್ತು.
ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಈ ರೀತಿ ಕರ್ತವ್ಯದಲ್ಲಿದ್ದ ತೆಲಂಗಾಣ ಪೊಲೀಸ್ ಅಧಿಕಾರಿಯೊಬ್ಬರ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೂ ತನ್ನ ದರ್ಪ ಮೆರೆದಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಸದ್ಯ ರೇಣುಕಾ ಚೌಧರಿ ವಿರುದ್ಧ ಐಪಿಸಿ ಸೆಕ್ಷನ್ 353 (ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
PublicNext
16/06/2022 08:57 pm