ಹೊಸದಿಲ್ಲಿ: ಹೊಸದಿಲ್ಲಿ: ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ನಿರಾಳರಾಗಿದ್ದಾರೆ. ಸಾವಿರಾರು ಮಂದಿಯ ಸಾವು ಹಾಗೂ ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದ್ದ 2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಸರ್ವೋಚ್ಛ ನ್ಯಾಯಾಲಯ ಕ್ಲಿನ್ ಚಿಟ್ ನೀಡಿದೆ.
ಆ ಮೂಲಕ ಗಲಭೆಯಲ್ಲಿ ಮೋದಿ ಅವರ ಪಾತ್ರ ಇಲ್ಲ ಎನ್ನುವ ಎಸ್ಐಟಿಯ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
2002ರ ಗಲಭೆ ವೇಳೆ ನರೇಂದ್ರ ಮೋದಿ ಅವರು ಗುಜರಾತ್ ನ ಮುಖ್ಯಮಂತ್ರಿಯಾಗಿದ್ದರು. ಈ ಗಲಭೆಯಲ್ಲಿ ಖುದ್ದು ಮೋದಿಯವರ ಕೈವಾಡ ಇದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಪ್ರಕರಣದ ತನಿಖೆ ನಡೆಸಿದಿ ವಿಶೇಷ ತನಿಖಾ ದಳ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮೋದಿ ಹಾಗೂ ಇನ್ನಿತರ 63 ಮಂದಿಯ ಮೇಲಿನ ಆರೋಪವನ್ನು ತಳ್ಳಿ ಹಾಕಿತ್ತು.
ಎಸ್ಐಟಿಯ ನಿರ್ಧಾರವನ್ನು ಪ್ರಶ್ನೆ ಮಾಡಿ ಪ್ರಕರಣದಲ್ಲಿ ಪೊಲೀಸ್ ಹಾಗೂ ರಾಜಕಾರಣಿಗಳ ಕುತಂತ್ರದ ಬಗ್ಗೆ ಹೊಸದಾಗಿ ತನಿಖೆ ನಡೆಸಬೇಕು ಎಂದು ಕೋರಿ ಗಲಭೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಸಂಸದ ಇಷಾನ್ ಜಫ್ರಿ ಅವರ ಪತ್ನಿ ಝಕಿಯಾ ಜಫ್ರಿ ಎಂಬವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಸ್ಐಟಿಯ ನಿರ್ಧಾರವನ್ನು ಎತ್ತಿ ಹಿಡಿದಿದ್ದಾರೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾದರೇ, ಎಸ್ ಐಟಿ ಪರ ಮುಕುಲ್ ರೋಹಟ್ಗಿ ವಾದ ಮಂಡಿಸಿದರು.ವಾದ ವಿವದಗಳನ್ನು ಆಲಿಸಿದ ಕೋರ್ಟ್, ಮೋದಿ ಅವರನ್ನು ಖುಲಾಸೆಗೊಳಿಸಿದ ಎಸ್ ಐಟಿಯ ತನಿಖಾ ವರದಿಯನ್ನು ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಎಂಎಂ ಖಾನ್ವಿಲ್ಕರ್, ನ್ಯಾ. ದಿನೇಶ್ ಮಹೇಶ್ವರಿ ಹಾಗೂ ಸಿಟಿ ರವಿಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಎಸ್ಐಟಿ ವರದಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ.
PublicNext
24/06/2022 12:29 pm