ಬೆಂಗಳೂರು : ಬೆಳ್ಳಂಬೆಳಿಗ್ಗೆ ಶಾಸಕ ಜಮೀರ್ ಗೆ ಎಸಿಬಿ ಶಾಕ್ ನೀಡಿದೆ. ಹೌದು ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಇಂದು ಬೆಳಿಗ್ಗೆ ಜಮೀರ್ ಕವೇರಿ ಮನೆ ಸೇರಿದಂತೆ ಐದು ಕಡೆ ದಾಳಿ ಮಾಡಿದೆ.
ಏಕಕಾಲಕ್ಕೆ ಈ ದಾಳಿಯನ್ನು ನಡೆಸಲಾಗಿದೆ. ಇನ್ನು ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಬಳಿಯ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ ನಲ್ಲಿಯ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ,ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ.
ಸದ್ಯ ಅಧಿಕಾರಿಗಳು ಮನೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
05/07/2022 07:39 am