ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ಪೊಲೀಸ್ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ಅಮಾನತ್ತು ಮಾಡಲಾಗಿದೆ. ಅಸಂದ್ರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಧ್ಯಾನೇಂದ್ರ ಪ್ರತಾಪ್ ಸಿಂಗ್ ತಮ್ಮ ಕಚೇರಿಯ ಕೊಠಡಿಯಲ್ಲಿ ಯಾರೊಂದಿಗೋ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಯೋಗಿ ವಿರುದ್ಧ ಆಕ್ಷೇಪಾರ್ಹ ರೀತಿಯಲ್ಲಿ ಮಾತನ್ನಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದರಿಂದ, ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ವೈರಲ್ ಆದ ವಿಡಿಯೋ ಗಮನಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಶಶಾಂಕ್ ಕುಶುಮೇಶ್ ಅವರು ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ವತ್ಸ್ ಅವರಿಗೆ ಅಧಿಕಾರಿಯ ವಿರುದ್ಧ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಹುದ್ದೆಯಲ್ಲಿರುವವರು ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರದ ವಿರುದ್ಧ ಧಂಗೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ವಜಾ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.
PublicNext
08/07/2022 09:37 am