ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟೀಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.
ಜುಲೈ 21ರಂದು ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟೀಸ್ ಜಾರಿ ಮಾಡಿತ್ತು. ಆದರೆ ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಸೋನಿಯಾ ಅವರು ಹೆಚ್ಚಿನ ಸಮಯವಕಾಶ ಕೋರಿದ್ದರು.
PublicNext
11/07/2022 08:29 pm