ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಕೂದಲು, ಶರ್ಟ್ ಹಿಡಿದು ಎಳೆದಾಡಿದ ದೆಹಲಿ ಪೊಲೀಸ್‌.!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಎರಡನೇ ಸುತ್ತಿನ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಜರಾಗಿದ್ದಾರೆ. ಸೋನಿಯಾ ಗಾಂಧಿ ವಿಚಾರಣೆಯನ್ನು ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಕಾರರು ಬ್ಯಾರಿಕೇಡ್‌ಗಳನ್ನು ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ದಿದ್ದಾರೆ. ಪೊಲೀಸ್‌ ವಾಹನ ಹತ್ತಲು ನಿರಾಕರಿಸಿ ಪ್ರತಿಭಟಿಸಿದ ಶ್ರೀನಿವಾಸ ಅವರ ಕೂದಲು, ಶರ್ಟ್ ಹಿಡಿದ ಪೊಲೀಸರು ಎಳೆದಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Vijay Kumar
PublicNext

PublicNext

26/07/2022 04:06 pm

Cinque Terre

53.74 K

Cinque Terre

22

ಸಂಬಂಧಿತ ಸುದ್ದಿ