ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆಗೆ ಲಗ್ಗೆ ಇಟ್ಟ ಸಿದ್ದು ಅಭಿಮಾನಿಗಳು; ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 6 ಕಿ.ಮೀ ಟ್ರಾಫಿಕ್ ಜಾಮ್.!

ದಾವಣಗೆರೆ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣ ಮಾಡುವ ಜನರಿಗೆ ಹಾಗೂ ವಾಹನಗಳಿಗೆ ಟ್ರಾಫಿಕ್ ಜಾಮ್‌ ತಲೆ ಬಿಸಿ ತಂದಿದೆ.

ಹೌದು. ಬೆಂಗಳೂರು- ಪುಣೆ ಹೆದ್ದಾರಿಯಲ್ಲಿ ಬರೋಬ್ಬರಿ 6 ಕಿ. ಮೀ. ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿದೆ. ಪರಿಣಾಮ ವಾಹನ ಸವಾರರು ಹಾಗೂ ಚಾಲಕರು ಪರದಾಡುವಂತಾಗಿದೆ.

ದಾವಣಗೆರೆ ನಗರದ ಹೊರವಲಯದಲ್ಲಿ ಇರುವ ಪುಣೆ- ಬೆಂಗಳೂರು ಹೆದ್ದಾರಿ (NH-48)ರ ಬೈಪಾಸ್ ರಸ್ತೆಯ ಸಮೀಪದಲ್ಲಿರುವ ಶಾಮನೂರು ಪ್ಯಾಲೇಸ್ ಗ್ರೌಂಡ್‌ನಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಇದರಿಂದಾಗಿ ಬೈಪಾಸ್ ರಸ್ತೆ ಸಂಪೂರ್ಣ ಜಾಮ್ ಆಗಿದ್ದು, ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ. ಸುಗಮ ಸಂಚಾರ ಕಲ್ಪಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

Edited By : Vijay Kumar
PublicNext

PublicNext

03/08/2022 02:49 pm

Cinque Terre

51.92 K

Cinque Terre

14

ಸಂಬಂಧಿತ ಸುದ್ದಿ