ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯನವರಿಗೆ ಶುಭಾಶಯ ತಿಳಿಸಿದವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: 75ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಆದ್ರೆ ಬರ್ತ್ ಡೇ ಗೆ ಶುಭಾಶಯ ತಿಳಿಸಿ ಕಾರ್ಯಕರ್ತರಿಗೆ ಸಂಕಷ್ಟ ಶುರುವಾಗಿದೆ.

ಹೌದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

04/08/2022 01:49 pm

Cinque Terre

24.39 K

Cinque Terre

4

ಸಂಬಂಧಿತ ಸುದ್ದಿ