ಚಂಡೀಗಢ: ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸ್ ಸಿಬ್ಬಂದಿ ಜಲಫಿರಂಗಿ ಪ್ರಯೋಗಿಸಿದ್ದಾರೆ.
ಹೌದು ಪಂಜಾಬ್ ನ ಚಂಡೀಗಢದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಬೃಹತ್ ಪ್ರತಿಭಟನೆ ನಡೆಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿ,ತಳ್ಳಾಟ ನೂಕಾಟ ನಡೆಸಿದ್ದಾರೆ. ಹೀಗಾಗಿ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಜಲಫಿರಂಗಿ ಪ್ರಯೋಗಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಜೊತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
PublicNext
05/08/2022 04:00 pm