ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರದಿಂದಲೇ 'ಚಾಮರಾಜಪೇಟೆ ಈದ್ಗಾ ಮೈದಾನ'ದಲ್ಲಿ ಧ್ವಜಾರೋಹಣ: ಆರ್‌.ಅಶೋಕ್ ಘೋಷಣೆ

ಬೆಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ನಗರದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಆಗಸ್ಟ್ 15ರಂದು ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ.

ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಾಮರಾಜಪೇಟೆ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸ್ಥಳೀಯ ಶಾಸಕ ಜಮೀರ್ ಅಹ್ಮದ್​ ಅವರಿ​ಗೂ ಅವಕಾಶವಿರುವುದಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ರಾಜ್ಯ ಸರ್ಕಾರ ವಿವಾದವೊಂದನ್ನು ಸದ್ಯಕ್ಕೆ ಇತ್ಯರ್ಥ ಪಡಿಸಿದ್ದು, ಈ ಸಂಬಂಧ, ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ. ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಉತ್ತರ ತಾಲ್ಲೂಕಿನ ಸಹಾಯಕ ಆಯುಕ್ತರು ರಾಷ್ಟ್ರ ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಧ್ವಜದ ನೀತಿ ನಿಯಮಗಳಡಿ ಎಲ್ಲರೂ ಭಾಗವಹಿಸಬಹುದು. ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಅಂತ ತೀರ್ಪು ಬಂದಿದೆ. ಹೀಗಾಗಿ ನಮ್ಮ ಇಲಾಖೆಯ ಸುಪರ್ದಿಯಲ್ಲೇ ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ನಡೆಯಲಿದೆ. ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರು ಬರಬಹುದು. ಅಲ್ಲಿ ಭಾರತ ಮಾತಾಕೀ ಜೈ, ವಂದೇ ಮಾತರಂ ಘೋಷಣೆ ಮಾತ್ರ ಕೇಳಿಬರುತ್ತದೆ. ಬೇರೆ ಯಾವುದೇ ಘೋಷಣೆ ಮಾಡಬಾರದು ಎಂದುಸಚಿವರು ಸ್ಪಷ್ಟಪಡಿಸಿದರು.

Edited By : Vijay Kumar
PublicNext

PublicNext

11/08/2022 05:08 pm

Cinque Terre

94.25 K

Cinque Terre

5

ಸಂಬಂಧಿತ ಸುದ್ದಿ