ಬಜಪೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ವೇಳೆ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳು ವೀರ ಸಾವರ್ಕರ್ ಭಾವಚಿತ್ರ ಹಿಡಿದುದಕ್ಕೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದ್ದು, ಶಿಕ್ಷಕರಿಂದ ಕ್ಷಮೆ ಕೇಳಿಸಿದ ಘಟನೆ ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ. ಘಟನೆಗೆ ಬಿಜೆಪಿ ಮತ್ತು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಸಮ್ಮಿಶ್ರ ಆಡಳಿತ ಇರುವ ಗುರುಪುರ ಪಂಚಾಯತ್ ನಲ್ಲಿ ನೃತ್ಯದಲ್ಲಿ ವೀರ ಸಾವರ್ಕರ್ ಭಾವ ಚಿತ್ರ ಪ್ರದರ್ಶಿಸಿದ್ದನ್ನು ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು ಆಕ್ಷೇಪಿಸಿ ಶಿಕ್ಷಕರಿಂದ ಕ್ಷಮೆ ಕೇಳಿಸಿದ್ದನ್ನು ಬಿಜೆಪಿ ಬೆಂಬಲಿತ ಸದಸ್ಯರು ವಿರೋಧಿಸಿದ್ದರು. ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿದ್ದಾರೆ.
PublicNext
15/08/2022 07:12 pm