ತುಮಕೂರು: ತುಮಕೂರಿನಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಫೆಕ್ಸ್ ವಿಚಾರಕ್ಕೆ ಜಟಾಪಟಿ ಮುಂದುವರೆದಿದ್ದು, ಟೌನ್ ಹಾಲ್ ವೃತ್ತದ ಬಳಿ ಇರುವ ನಾಗರಕಟ್ಟೆ ಗಣಪತಿ ದೇವಸ್ಥಾನದ ಬಳಿ ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ದಿನ ವೀರ ಸಾವರ್ಕರ್ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಇದಕ್ಕೆ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು. ಕಿಡಿಗೇಡಿಗಳ ಕೃತ್ಯ ಖಂಡಿಸಿ ವಿಶ್ವ ಹಿಂದೂ ಪರಿವತ್ ಹಾಗೂ ಭಜರಂಗದಳದ ಕಾರ್ಯಕರ್ತರು ಬುಧವಾರ ರಾತ್ರಿ ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಸಿದ್ದಾರೆ.
ಸ್ಥಳದಲ್ಲಿ ಪೋಲೀಸ್ ಸಿಬ್ಬಂದಿ ಮೊಕ್ಕಂ ಹೂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
PublicNext
18/08/2022 11:05 am