ಮಳೆಯಿಂದ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾಗ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆಯಲಾಗಿದ್ದು, ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.
ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಸಂಪತ್ ಬಂಧಿತ ಆರೋಪಿ. ಮೂಲತಃ ನಾನು ಜೆಡಿಎಸ್ ಪಕ್ಷದವನು. ಮಾಜಿ ಸಚಿವ ಜೀವಿಜಯ ಬೆಂಬಲಿಗನಾಗಿದ್ದು, ಜೀವಿಜಯ ಜೊತೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್
ಸೇರ್ಪಡೆ ಗೊಂಡಿದ್ದೇನೆ" ಎಂದು ಬಂಧನಕ್ಕೂ ಮೊದಲು ಮಾಧ್ಯಮಗಳಿಗೆ ಆರೋಪಿ ಸಂಪತ್ ಹೇಳಿಕೆ ನೀಡಿದ್ದಾನೆ.
ಸಂಪತ್ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವೈಯಕ್ತಿಕ ಕಾರ್ಯಕ್ಕೆ ಅಂದು ಗುಡ್ಡೆಹೊಸೂರಿಗೆ ಆಗಮಿಸಿದ್ದೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ಆಕ್ರೋಶಿತಗೊಂಡ ನಾನು ಅವರ ಕಾರಿಗೆ ಮೊಟ್ಟೆಯನ್ನು ಎಸೆದಿದ್ದೇನೆ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ.
PublicNext
20/08/2022 04:09 pm