ನವದೆಹಲಿ: ಎರಡು ದಿನಗಳ ಹಿಂದಷ್ಟೇ ಸಿಬಿಐ ದಾಳಿಗೆ ಒಳಗಾಗಿದ್ದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೇರಿದಂತೆ 14 ಜನರ ವಿರುದ್ಧ ಸಿಬಿಐ ಲುಕ್‌ಔಟ್ ನೋಟೀಸ್ ಜಾರಿ ಮಾಡಿದೆ. ಈ ಮೂಲಕ ಅವರು ವಿದೇಶ ಪ್ರಯಾಣ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.
ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 14 ಮಂದಿಯ ಹೆಸರನ್ನು ಸಿಬಿಐ ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಲುಕ್‌ಔಟ್ ಸುತ್ತೋಲೆಯು, ವ್ಯಕ್ತಿ ದೇಶದಿಂದ ಹೊರಗೆ ಹೋಗುವುದನ್ನು ನಿರ್ಬಂಧಿಸುತ್ತದೆ. ಇದನ್ನು ಉಲ್ಲಂಘಿಸಲು ಪ್ರಯತ್ನಿಸುವ ವ್ಯಕ್ತಿಯನ್ನು ಬಂಧಿಸಬಹುದಾಗಿದೆ.
ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಒಟ್ಟು 15 ಮಂದಿಯ ಹೆಸರನ್ನು ಉಲ್ಲೇಖಿಸಿದೆ. ಅವರಲ್ಲಿ ಸಿಸೋಡಿಯಾ ನಂಬರ್ ಒನ್ ಆರೋಪಿಯಾಗಿದ್ದಾರೆ. ಭ್ರಷ್ಟಾಚಾರ, ಅಪರಾಧ ಸಂಚು ಮತ್ತು ಖೋಟಾ ಖಾತೆಗಳ ಆರೋಪಗಳನ್ನು 11 ಪುಟಗಳ ದಾಖಲೆಯಲ್ಲಿ ಪಟ್ಟಿ ಮಾಡಲಾಗಿದೆ.
PublicNext
21/08/2022 11:29 am