ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಬಿಐ ವಿಚಾರಣೆ ಬೆನ್ನಲ್ಲೇ ದೆಹಲಿ ಡಿಸಿಎಂಗೆ ಇಡಿ ಸಂಕಷ್ಟ

ನವದೆಹಲಿ : ದೆಹಲಿ ಮದ್ಯ ನೀತಿಯ ಜಾರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ನಡೆಯುತ್ತಿರುವ ಸಿಬಿಐ ತನಿಖೆಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು (ED) ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ(ಎಫ್ಐಆರ್) ಮತ್ತು ಅಬಕಾರಿ ನೀತಿಯನ್ನು ತಿರುಚುವ ಮೂಲಕ ಉತ್ಪತ್ತಿಯಾದ ಅಪರಾಧದ ಆದಾಯವನ್ನು ಸಾಕ್ಷ್ಯಾಧಾರಗಳು ಬಹಿರಂಗಪಡಿಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್ ಐಆರ್ ನಲ್ಲಿ ಹೆಸರಿಸಲಾದ 15 ವ್ಯಕ್ತಿಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಸೇರಿದ್ದಾರೆ.

Edited By : Nirmala Aralikatti
PublicNext

PublicNext

23/08/2022 10:41 pm

Cinque Terre

51.8 K

Cinque Terre

6

ಸಂಬಂಧಿತ ಸುದ್ದಿ