ರಾಂಚಿ: ಅಕ್ರಮ ಗಣಿ ಗುತ್ತಿಗೆ ಪ್ರಕರಣ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ರ ಕೊರಳಿಗೆ ಸುತ್ತಿಕೊಂಡಿದ್ದು, ವಿಧಾನಸಭೆ ಸದಸ್ಯತ್ವ ಕಳೆದುಕೊಳ್ಳುವ ಹಂತದಲ್ಲಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯನ್ನು ಶಾಸಕ ಸ್ಥಾನದಿಂದ ವಜಾ ಮಾಡುವಂತೆ ಚುನಾವಣಾ ಆಯೋಗ ರಾಜ್ಯಪಾಲರಿಗೆ ಸೂಚಿಸಿದ್ದು, ಇನ್ನು ಕೆಲವೇ ಕ್ಷಣದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಮಹತ್ವದ ಆದೇಶ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಮ್ಮದೇ ಮಾಲೀಕತ್ವದ ಕಂಪನಿಗೆ ಗಣಿಗಾರಿಕೆ ಪರವಾನಗಿ ಕೊಟ್ಟುಕೊಳ್ಳುವ ಮೂಲಕ ಸಿಎಂ ಪ್ರಜಾಪ್ರತಿನಿಧಿ ಕಾಯ್ದೆಯ ಹಲವು ಅಂಶಗಳನ್ನು ಉಲ್ಲಂಘಿಸಿದ್ದಾರೆ. ಕಲ್ಲುಗಣಿಗಾರಿಕೆ ಲೈಸೆನ್ಸ್ ಪಡೆಯುವ ಮೂಲಕ ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು. ಹಾಗಾಗಿ ಈ ಕುರಿತು ರಾಜ್ಯಪಾರಲು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಅಭಿಪ್ರಾಯ ಕೇಳಿದ್ದರು. ನಿಯಮ ಉಲ್ಲಂಘನೆ ಸಾಬೀತಾದ ಹಿನ್ನೆಲೆ ಚುನಾವಣಾ ಆಯೋಗವು ಹೇಮಂತ್ ಸೊರೆನ್ರ ಶಾಸಕ ಸ್ಥಾನ ವಜಾಗೆ ಶಿಫಾರಸು ಮಾಡಿದೆ.
ಇನ್ನು ಮನೆಯಲ್ಲಿ ಎರಡು ಎಕೆ-47 ರೈಫಲ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ನಿಕಟವರ್ತಿ ಪ್ರೇಮ್ ಪ್ರಕಾಶ್ ಎಂಬುವರನ್ನು ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ಬಂಧಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ತನಿಖೆ ನಡೆಸುತ್ತಿರು ಇಡಿ ಅಧಿಕಾರಿಗಳು, ನಿನ್ನೆ ಜಾರ್ಖಂಡ್ನ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.
PublicNext
25/08/2022 05:00 pm