ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಭಾವಚಿತ್ರಕ್ಕೆ ಹಾನಿ ಖಂಡಿಸಿ ಹಿಂದು ಸಂಘಟನೆಗಳ ಪ್ರತಿಭಟನೆ

ದಾವಣಗೆರೆ: ಹೊನ್ನಾಳಿಯಲ್ಲಿ ವೀರಸಾವರ್ಕರ್ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯರ ಭಾವಚಿತ್ರ ಹರಿದು ಹಾಕಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಹೊನ್ನಾಳಿ ಮಂಡಲ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಾವರ್ಕರ್ ಫೋಟೋ ಹರಿದು ಹಾಕಿದವರ ವಿರುದ್ಧ ಘೋಷಣೆ ಹಾಕಿದ ಪ್ರತಿಭಟನಾಕಾರರು, ಸ್ವಾತಂತ್ರ್ಯ ಹೋರಾಟಗಾರನಿಗೆ ಮಾಡಿರುವ ಅಪಮಾನ ಇದು. ಯಾವುದೇ ಕಾರಣಕ್ಕೂ ಸಹಿಸುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಇನ್ನು ಹೊನ್ನಾಳಿ ಪೊಲೀಸ್ ಠಾಣೆಯ ಮುಂದೆ ಸುದ್ದಿ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಜಮಾಯಿಸಿದರು. ಸಾವರ್ಕರ್ ಹಾಗೂ ರೇಣುಕಾಚಾರ್ಯರ ಭಾವಚಿತ್ರವನ್ನು ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಹರಿದು ಹಾಕಿದ್ದಾರೆ. ಇಂಥವರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪೊಲೀಸರಿಗೆ ಮನವಿ ಸಲ್ಲಿಸಿದರು.

Edited By :
PublicNext

PublicNext

01/09/2022 03:25 pm

Cinque Terre

36.99 K

Cinque Terre

0

ಸಂಬಂಧಿತ ಸುದ್ದಿ