ಮುಂಬೈ: ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ 14 ದಿನಗಳವರೆಗೆ ವಿಸ್ತರಿಸಿ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಪತ್ರಾ ಚಾಳ್ ಯೋಜನೆಯಲ್ಲಿ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರನ್ನು ಜಾರಿ ನಿರ್ದೇಶನಾಲಯವು ಆಗಸ್ಟ್ 1ರಂದು ಬಂಧಿಸಿತ್ತು. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಪೂರಕ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತು. ಇದನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು ರಾವುತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿತು.
ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರು, ರಾವುತ್ ಅವರ ಆಪ್ತ ಪ್ರವೀಣ್ ರಾವುತ್ ಅವರನ್ನು ಒಳಗೊಂಡಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿದರು.ಇದರ ಜೊತೆಯಲ್ಲೇ ಜಾಮೀನು ಕೋರಿ ರಾವುತ್ ಅವರು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಸೆ.21ಕ್ಕೆ ಮುಂದೂಡಿದೆ.
PublicNext
19/09/2022 07:56 pm