ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತಕ್ಕೆ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು.ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಡಿ.ವೈ ಚಂದ್ರಚೂಡರಿದ್ದ ಪೀಠ ಈ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣ ಸಂಬಂಧ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಸಲ್ಲಿಸಿದ್ದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು.ಸದ್ಯ ಮಧ್ಯಂತರ ಆದೇಶ ನೀಡಿರುವ ಸುಪ್ರೀಂಕೋರ್ಟ್ ತನಿಖಗೆ ತಡೆ ನೀಡಿದೆ. ಆದರೆ ವಿಜಯೇಂದ್ರ ಸೇರಿದಂತೆ ಉಳಿದವರ ವಿರುದ್ಧ ತನಿಖೆ ನಡೆಯಲಿದೆ.
PublicNext
23/09/2022 03:18 pm