ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಡಿ ಜನಪರ ಕಾಳಜಿವಹಿಸಿ : ಬಿಎಸ್ ವೈಗೆ ಸಿದ್ದು ಸಂದೇಶ ರವಾನೆ

ಬೆಂಗಳೂರು : ಸದ್ಯ ರಾಜ್ಯದ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದಾರೆ ಅವರ ಪ್ರವಾಸದ ಬಗ್ಗೆ ಪ್ರತಿಯೊಬ್ಬರು ಒಂದೊಂದು ಮಾತನಾಡುತ್ತಿದ್ದಾರೆ.

ಇದೇ ಸಾಲಿನಲ್ಲಿ ನಿಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಬಿಎಸ್ ವೈ ಗೆ ಸಂದೇಶವೊಂದನ್ನಾ ರವಾನಿಸಿದ್ದಾರೆ.

ಹೌದು ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್ ವೈ ಸಂದೇಶ ನೀಡಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ.

ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.

ಸಿಎಂ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ, ಆದರೆ ಪ್ರಧಾನಿ ನೀಡಿದ್ದು 1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ.

ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ.

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ.

ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್.ಡಿ.ಆರ್.ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿಯವರು ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ.

ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ.

ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Edited By : Nirmala Aralikatti
PublicNext

PublicNext

18/09/2020 10:10 pm

Cinque Terre

146.47 K

Cinque Terre

18

ಸಂಬಂಧಿತ ಸುದ್ದಿ