ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆಯಿಂದ ತತ್ತರಿಸಿದ ಉತ್ತರ ಕರ್ನಾಟಕ : ವೈಮಾನಿಕ ಪರೀಕ್ಷೆ ನಡೆಸಿದ ಸಿಎಂ ಬಿ ಎಸ್ ವೈ

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.

ಉತ್ತರ ಕರ್ನಾಟಕ ಭಾಗದಲ್ಲಿನ ಬೆಳಗಾವಿ, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸತತ ಮಳೆ ಹಾಗೂ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.

ಸಾವಿರಾರು ಎಕರೆ ಪ್ರದೇಶದಲ್ಲಿನ ಫಸಲು ಹಾನಿಗಿಡಾಗಿದ್ದು, ಲಕ್ಷಾಂತರ ಜನರ ಬದುಕು ಬೀದಿದೆ ಬಂದಿದೆ.

ಸದ್ಯ ವೈಮಾನಿಕ ಪರೀಕ್ಷಗೆ ತೆರಳಿರುವ ಸಿಎಂ ಜೊತೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಉಪಸ್ಥಿತರಿದ್ದರು.

"ಜನರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಸೌಕರ್ಯ ಒದಗಿಸಲು ತೀರ್ಮಾನ ತೆಗೆದುಕೊಳ್ಳುತ್ತೇವೆ" ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

Edited By : Nirmala Aralikatti
PublicNext

PublicNext

21/10/2020 01:43 pm

Cinque Terre

114.13 K

Cinque Terre

3