ಬೆಂಗಳೂರು: ಮಳೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಅನೇಕ ಜನರು ಸೂರು ಕಳೆದುಕೊಂಡು ಕಂಗಾಲಾಗಿದ್ದಾರೆ. ಅಂಥವರ ನೆರವಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ.
ಮಳೆ, ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಮೊತ್ತಕ್ಕೆ ರಾಜ್ಯ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ. ಈ ಮೂಲಕ ಎಷ್ಟು ಹಾಕಿಗೆ ಎಷ್ಟು ಪರಿಹಾರ ಮೊತ್ತ ನೀಡಬೇಕು ಎಂದು ಸರ್ಕಾರ ತಿಳಿಸಿದೆ.
ನೆರೆ ಅಥವಾ ಮಳೆಗೆ ಶೇ.75 ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ ಹಾಗೂ ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳನ್ನು ಕೆಡವಿ ಕಟ್ಟಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇನ್ನು ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ 3 ಲಕ್ಷ ರೂ. ಪರಿಹಾರದ ಮೊತ್ತವನ್ನು ನಿಗದಿ ಮಾಡಿದೆ. ಅಷ್ಟೇ ಅಲ್ಲದೆ ಶೇ.15-35 ರಷ್ಟು ಅಲ್ಪ ಹಾನಿಯಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಹಾಗೂ ಬಟ್ಟೆ, ದಿನಬಳಕೆ ವಸ್ತುಗಳ ಹಾನಿಗೆ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ಪರಿಹಾರ ನೀಡಲಾಗುವುದು.
PublicNext
21/10/2020 03:21 pm