ಉಡುಪಿ: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅಪಾರ ಬೆಳೆಹಾನಿ ಸಂಭವಿಸಿದೆ. ಬೆಳೆ ಹಾನಿ ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶೋಭಾ ಕರಂದ್ಲಾಜೆ ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ಕಳಿಸಲು ರಾಜ್ಯ ಸರಕಾರಕ್ಕೆ ಈ ಕುರಿತು ಸೂಚನೆ ನೀಡಲಾಗಿದೆ.ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ.ದೇಶಾದ್ಯಂತ ಮಳೆಯ ಪ್ರಮಾಣ ಹೆಚ್ಚಿದೆ.ನಿರೀಕ್ಷೆ ಮಾಡದ ರೀತಿಯಲ್ಲಿ ಎಲ್ಲ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.ಭತ್ತ ರಾಗಿ ಜೋಳ ಅಪಾರ ಪ್ರಮಾಣದಲ್ಲಿ ನಾಶವಾಗುತ್ತಿದೆ.
ಭತ್ತ ಒಣಗಿಸಲಾಗದ ಪರಿಸ್ಥಿತಿ ಎದುರಾಗಿದೆ.ಅಗ್ರಿಕಲ್ಚರ್ ಇನ್ಪ್ರಾಸ್ಟ್ರಕ್ಚರ್ ಫಂಡ್ ನಿಂದ ಡ್ರೈಯರ್ ಖರೀದಿಗೆ ಕೇಂದ್ರ ವ್ಯವಸ್ಥೆ ಮಾಡಲಿದೆ.ವೇರ್ ಹೌಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇವೆ.ಹೊಸ ತಂತ್ರಜ್ಞಾನ ಬಳಸಿಕೊಳ್ಳಲು ರಾಜ್ಯ ಸರಕಾರಕ್ಕೆ ಸೂಚನೆ ಕೊಡಲಾಗಿದೆ ಎಂದು ಹೇಳಿದ್ದಾರೆ.
PublicNext
19/11/2021 01:14 pm