ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಇಂದು ಸಿಎಂ ಸಭೆ

ಬೆಂಗಳೂರು: ರಾಜ್ಯದಾದ್ಯಂತ ಮತ್ತೆ ಮಳೆ ಆರ್ಭಟ ಜೋರಾಗಿದೆ. ಹಲವೆಡೆ ಗುಟ್ಟ ಕುಸಿತ ಹಾಗೂ ಮನೆಗಳಿಗೆ ನೀರು ನುಗ್ಗುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಇನ್ನೊಂದೆಡೆ ಮಾರಕ ಕಾಯಿಲೆ ಮಂಕಿಪಾಕ್ಸ್ ಭೀತಿ ಕೂಡ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ಮಂಗಳವಾರ ಮಹತ್ವದ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ ಕುರಿತಂತೆ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗಿದ್ದು ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

Edited By : Nagaraj Tulugeri
PublicNext

PublicNext

02/08/2022 09:57 am

Cinque Terre

35.73 K

Cinque Terre

0

ಸಂಬಂಧಿತ ಸುದ್ದಿ