ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರೆ ಪೀಡಿತ ಪ್ರದೇಶದಲ್ಲಿ ತುರ್ತು ಕಾರ್ಯಕ್ಕಾಗಿ ೬೦೦ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ೧೩ ಜಿಲ್ಲೆಗಳ ೪೬೬ ಗ್ರಾಮಗಳು ನೆರೆ ಪೀಡಿತವಾಗಿವೆ. ಈ ಪ್ರದೇಶದಲ್ಲಿ ತುರ್ತು ಕಾರ್ಯಕ್ಕಾಗಿ ೬೦೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೆರೆ ಹಾನಿಯ ಬಗ್ಗೆ ೧೫ ದಿನಗಳಲ್ಲೇ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಸಂಪೂರ್ಣವಾಗಿ ಮನೆ ನಾಶವಾಗಿದ್ದರೆ ೫ ಲಕ್ಷ ರೂ., ಭಾಗಶಃ ಹಾನಿಗೊಂಡಿದ್ದರೇ ೩ ಲಕ್ಷ ರೂ. ಹಾಗೂ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದರೆ ೫೦ ಸಾವಿರ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
PublicNext
01/08/2021 03:25 pm