ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಸುರಪುರ ತಾಲ್ಲೂಕು ಆಸ್ಪತ್ರೆಗೆ ಸಚಿವ ನಾಗೇಶ್ ಭೇಟಿ, 3ನೇ ಅಲೆ ಎದುರಿಸಲು ಸನ್ನದ್ದ.!

ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಬೆಳೆ ಹಾನಿಯಾದ ಪ್ರವಾಹ ಪೀಡಿತ ಪ್ರದೇಶಕ್ಕೆ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಬಿ.ಸಿ.ನಾಗೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸುರಪುರ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದರು. ಜೊತೆಗೆ ಅಪೌಷ್ಟಿಕ ಮಕ್ಕಳ ವಾರ್ಡ್ ನಲ್ಲಿದ್ದ ತಾಯಿ ಮಗವನ್ನು ವಿಚಾರಿಸಿದರು.

ಬಳಿಕ ಮಾತನಾಡಿದ, ಸಚಿವರು ಕೋವಿಡ್ 19 3ನೇ ಅಲೆಗೆ ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗಿದ್ದು,ಮುಖ್ಯವಾಗಿ ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಸಭೆ ನಡೆಸಬೇಕು ಜೊತೆಗೆ ಅಧಿಕಾರಿಗಳು ಸನ್ನದ್ದರಾಗಿದ್ದಾರೆ ಅಂತಾ ಹೇಳಿದ್ರು.

ಇನ್ನು ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಟ್ಟಿದ್ದರಿಂದ ಪ್ರವಾಹ ಉಂಟಾಗಿ ರೈತರು ಬೆಳೆದ ಬೆಳೆ ನೀರು ಪಾಲಾಗಿದೆ. ಈ ಬಗ್ಗೆ ಅಧಿಕಾರಿಗಳು ಸರ್ವೇ ಮಾಡಿದ್ದರೆ. ಎಲ್ಲಾ ರೈತರಿಗೆ ಸಮರ್ಪಕವಾಗಿ ಪರಿಹಾರ ನೀಡಲಾಗುತ್ತದೆ ಎಂದರು.

ಅಲ್ಲದೇ ಪ್ರವಾಹ ತಗ್ಗಿಸಲು ಸ್ಥಳೀಯ ಶಾಸಕಾರದ ರಾಜುಗೌಡ ಅವರು, ವೈಜ್ಞಾನಿಕವಾಗಿ ನೀರು ನಿಲ್ಲಿಸಲು 290 ಕೋಟಿ ವೆಚ್ಚದಲ್ಲಿ ಯೋಜನೆ ಕೈಗೊಂಡಿದ್ದಾರೆ ಅಂತಾ ಹೇಳಿದರು.

ಒಟ್ಟಾರೆಯಾಗಿ ಯಾದಗಿರಿ ಜಿಲ್ಲೆಗೆ ಆಗಮಿಸಿದ ಸಚಿವರು ನೆರೆ ಪೀಡಿತ ಹಾಗೂ ಕೋವಿಡ್ 19 ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಹಾಗೂ 3ನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

-ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ.

Edited By : Shivu K
PublicNext

PublicNext

08/08/2021 06:13 pm

Cinque Terre

129.64 K

Cinque Terre

2

ಸಂಬಂಧಿತ ಸುದ್ದಿ